

ತುಮಕೂರು: ಇತಿಹಾಸ ಪ್ರಸಿದ್ಧ ಗೂಳೂರು ಶ್ರೀಮಹಾಗಣಪತಿಯ ವಿಸರ್ಜನಾ ಮಹೋತ್ಸವ ಭಾನುವಾರ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವಯುತವಾಗಿ ನಡೆಯಿತು.
ಬಲಿಪಾಢ್ಯಮಿ ದಿನದಂದು ಪ್ರತಿಷ್ಠಾಪನೆಯಾಗಿ ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊAಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗಣೇಶಮೂರ್ತಿ ವಿಸರ್ಜಿಸಲಾಯಿತು.
ಎರಡು ದಿನಗಳ ಕಾಲ ನಡೆದ ಗೂಳೂರು ಗಣೇಶ ಜಾತ್ರೆಯಲ್ಲಿ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಪುನೀತರಾದರು.
ಗ್ರಾಮದ 18 ಕೋಮಿನ ಜನರು ಒಗ್ಗೂಡಿ ಬೃಹತ್ ಗಣೇಶಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಸರ್ವಾಲಂಕೃತ ವಾಹನದಲ್ಲಿ ಕೂರಿಸಿ ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಭಾನುವಾರ ಸಂಜೆ ಗೂಳೂರು ಕೆರೆಯಲ್ಲಿ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಗಣೇಶಮೂರ್ತಿ ವಿಸರ್ಜಿಸಲಾಯಿತು.