'ಹರ್​ ಘರ್​ ತಿರಂಗಾ' ಅಭಿಯಾನ

060822 reliminary meeting of Har Ghar Tiranga Abhiyan
ರಾಯಚೂರಿನ ಸಹಾಯಕ ಆಯುಕ್ತರ ಕಚೇರಿ ಮುಂಭಾಗದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕಾಗಿ ಪೂರೈಕೆಯಾದ ರಾಷ್ಟ್ರಧ್ವಜಗಳನ್ನು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಶನಿವಾರ ಪ್ರದರ್ಶಿಸಿದರು.
Published on

ತುಮಕೂರು: ಭಾರತ ಸ್ವಾಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಆ.15ರ ವರೆಗೆ "ಹರ್​ ಘರ್​ ತಿರಂಗಾ' ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್​ ತಿಳಿಸಿದ್ದಾರೆ.

ಅಭಿಯಾನದ ಅಂಗವಾಗಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್​ಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಪಾಲಿಕೆ ವತಿಯಿಂದ ನಗರದ ಆಯ್ದ ಸ್ಥಳಗಳಲ್ಲಿ ಸೆಲ್ಫಿ ಪಾಯಿಂಟ್​ಗಳನ್ನು ನಿರ್ಮಿಸಲಾಗುವುದು. ಸಾರ್ವಜನಿಕರು ತಮ್ಮ ಮನೆಗಳ ಮೇಲ್ಭಾಗದಲ್ಲಿ ರಾಷ್ಟ್ರ ಧ್ವಜ ಹಾರಿಸಿ, ತಿರಂಗಾ ಸೆಲ್ಫಿಗಳನ್ನು ತೆಗೆದು  harghartiranga.com ನಲ್ಲಿ ಅಪ್ಲೋಡ್​ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಿಲ್ಲಾದ್ಯಂತ ಲಭ್ಯವಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಗೌರವಿಸಲಾಗುವುದು. ಸ್ವಾತಂತ್ರ್ಯೊತ್ಸವ ಹಿನ್ನೆಲೆಯುಳ್ಳ ಸ್ಥಳ, ಕಟ್ಟಡ, ಶಿಲಾ ಫಲಕಗಳನ್ನು ಗುರುತಿಸಿ ತಳಿರು ತೋರಣ ಹಾಗೂ ವಿದ್ಯುತ್​ ದೀಪಗಳಿಂದ ಅಲಂಕರಿಸಲಾಗುವುದು.

ತುಮಕೂರು ವಿವಿಸಹಯೋಗದಲ್ಲಿ ಮ್ಯಾರಥಾನ್​ ಓಟದ ಸ್ಪರ್ಧೆಯನ್ನು ಆಯೋಜಿಸಲಾಗುವುದು. ಸ್ವಾತಂತ್ರ್ಯೊತ್ಸವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ, -ಕಾಲೇಜುಗಳ ಹಂತದಲ್ಲಿ ಜಾಥಾ ಕಾರ್ಯಕ್ರಮ ಆಯೋಜಿಸಲಾಗುವುದು. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಸ್ಥಳಿಯ ಮಹಿಳಾ ಸಂಘ ಸಂಸ್ಥೆಗಳು, ಎಲ್ಲಾ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಆಗಸ್ಟ್​ 13 ರಿಂದ 15ರ ವರೆಗೆ ತಮ್ಮ ಮನೆಗಳ ಮೇಲೆ ರಾಷ್ಟ್ರ ಬಾವುಟಗಳನ್ನು ಹಾರಿಸಿ, ತಿರಂಗಾ ಸೆಲ್ಫಿಗಳನ್ನು ತೆಗೆದು  harghartiranga.com ನಲ್ಲಿ ಅಪ್ಲೋಡ್​ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶುಭಕಲ್ಯಾಣ್​ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net