ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

HDK
Published on

ತುಮಕೂರು: ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಪ್ರವಾರದ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ವೈಯಕ್ತಿಕ ನಿಂದನೆ ಮಾಡಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಚಾರ ಭಾಷಣದಲ್ಲಿ ಡಿ.ಕೆ.ಸುರೇಶ್ ರೌಡಿಶೀಟರ್ ಕೊತ್ವಾಲ್ ರಾಮಚಂದ್ರನ ಶಿಷ್ಯ, ಅವನ ಗರಡಿಯಲ್ಲಿ ಬೆಳೆದವನು, ಇಂತಹವರಿAದ ದೇಶ, ರಾಜ್ಯ ಉಳಿಯಲು ಸಾಧ್ಯವೇ, ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ನಿಂದಿಸಿದ್ದರು.

ಏ.13ರಂದು ಗುಬ್ಬಿ ಪಟ್ಟಣದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿ ಪರವಾಗಿ ಭಾಷಣ ಮಾಡಿದ್ದರು.

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಡಿ.ಎಚ್.ಮಹೇಶ್ ನೀಡಿದ ದೂರಿನ ಮೇರೆಗೆ ಗುಬ್ಬಿ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net