

ತುಮಕೂರು: ಸಾರಿಗೆ ಇಲಾಖೆ, ಸಿದ್ಧಗಂಗಾ ವೈದ್ಯಕಿಯ ಮಹಾವಿದ್ಯಾಲಯ ಹಾಗೂ ವಾಸನ್ ಐ ಕೇರ್ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಫೆ.5ರಂದು ಬೆಳಗ್ಗೆ 11ಕ್ಕೆ "ಆರೋಗ್ಯ ಜಾಗೃತಿ ಮತ್ತು ತಪಾಸಣಾ ಶಿಬಿರ ಹಾಗೂ ಜಾಗೃತಿ ನಡಿಗೆ' ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ಬಿ.ಹೆಚ್.ರಸ್ತೆಯಲ್ಲಿರುವ ಆರ್ಟಿಒ ಕಚೇರಿಯಲ್ಲಿ ನಡೆಯಲಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸುವರು. ಅಪರ ಸಾರಿಗೆ ಆಯುಕ್ತ(ಪ್ರವರ್ತನ) ಸಿ.ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು.
ಶಿಬಿರದಲ್ಲಿ ಉಚಿತವಾಗಿ ಬಿಪಿ, ಸಕ್ಕರೆ ಕಾಯಿಲೆ, ಇಸಿಜಿ, ಕಂಪ್ಯೂಟರೈಸ್ಡ್ ಕಣ್ಣಿನ ಪರೀಕ್ಷೆಯನ್ನು ಮಾಡಲಾಗುವುದು. ವಾಹನ ಮಾಲೀಕರು ಮತ್ತು ಚಾಲಕರು ಅವಕಾಶ ಬಳಸಿಕೊಳ್ಳಬಹುದು.