

ತುಮಕೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಬಾಲಗರ್ಭಿಣಿ, ಗಂಡಾಂತರ ಗರ್ಭಿಣಿ, ರಕ್ತಹಿನತೆ, ಕುಟುಂಬ ಕಲ್ಯಾಣ ವಿಧಾನ, ಸುರಕ್ಷಿತ ಗರ್ಭಪಾತ, ಭ್ರೂಣಲಿಂಗ ಪತ್ತೆ ಕಾಯ್ದೆ, ಆಯುಷ್ಮಾನ್ ಭಾರತ್ ಕಾರ್ಡ್ ಹಾಗೂ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಬೀದಿ ನಾಟಕ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಲು ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಸಂಗೀತ ಮತ್ತು ಡ್ರಾಮಾ ಡಿವಿಜನ್, ಕನ್ನಡ ಮತ್ತು ಸಂಸತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಜಿಲ್ಲಾ ನೋಂದಣಿ ಇಲಾಖೆಯಲ್ಲಿ ನೋಂದಣಿಯಾಗಿರುವ ಕಲಾ ತಂಡಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಡಿಎಚ್ಒ ಕಚೇರಿಯ ಐಇಸಿ ವಿಭಾಗದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 23ರೊಳಗಾಗಿ ಸಲ್ಲಿಸಬಹುದು.