ಡೆಂಘೆ ಮಾಹಿತಿಗಾಗಿ ಸಹಾಯವಾಣಿ

Dengue
Published on

ತುಮಕೂರು: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೆ ಪ್ರಕರಣ, ಮುನ್ನೆಚ್ಚರಿಕೆ ಕ್ರಮ ಸೇರಿದಂತೆ ರೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ 0816- 2950120 ಆರಂಭಿಸಲಾಗಿದೆ.

ಸಹಾಯವಾಣಿ ಬೆಳಗ್ಗೆ 9 ರಿಂದ ಸಂಜೆ 5ರ ವರೆಗೂ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ನಿಗಧಿತ ಅವಧಿಯಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಡೆಂಘೆ ರೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಬಹುದು.

ಜಿಲ್ಲೆಯಲ್ಲಿ 2024ರ ಜನವರಿಯಿಂದ ಜು.11ರ ವರೆಗೆ 225 ಡೆಂಘೆ ಪ್ರಕರಣಗಳು ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ಜು.11ರಂದು ಡೆಂಘೆ ಜ್ವರಕ್ಕೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ 55 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 99 ಸೇರಿ ಒಟ್ಟು 154 ರಕ್ತ ಮಾದರಿ ಪರೀಕ್ಷೆಗೊಳಪಡಿಸಲಾಗಿದೆ.

ಒಳರೋಗಿಗಳಾಗಿ ಸರ್ಕಾರಿ ಆಸ್ಪತ್ರೆಯಲ್ಲಿ 7 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 5 ಸೇರಿ 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡೆಂಘೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾವು ಸಂಭವಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net