29 ರಂದು ಪ್ರೌಢಶಾಲಾ ಶಿಕ್ಷಕರ ಕ್ರೀಡಾಕೂಟ

schoold education
Published on

ತುಮಕೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶಾಲಾಶಿಕ್ಷಣ ಇಲಾಖೆ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹಾಗೂ ಉಪಪ್ರಾಂಶುಪಾಲರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಶಿಕ್ಷಕರ ಕ್ರೀಡಾಕೂಟ ಹಾಗು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆ.29 ರಂದು ಬೆಳಗ್ಗೆ 9ಕ್ಕೆ ಹಮ್ಮಿಕೊಳ್ಳಲಾಗಿದೆ.

ಡಿಡಿಪಿಐ ಸಿ.ರಂಗಧಾಮಯ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಬಿಇಒ ಡಾ.ಸೂರ್ಯಕಲಾ ಅಧ್ಯಕ್ಷತೆವಹಿಸುವರು. ಡಯಟ್ ಉಪನಿರ್ದೇಶಕ ಮಂಜುನಾಥ್, ಶಿಕ್ಷಣಾಧಿಕಾರಿಗಳಾದ ಎ.ಟಿ.ರಂಗದಾಸಪ್ಪ, ವಿ.ಮಾಧವರೆಡ್ಡಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಪರಮೇಶ್ವರಪ್ಪ, ಬಿಆರ್‌ಸಿ ಗಾಯತ್ರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಲೋಕೇಶ್‌ರೆಡ್ಡಿ, ಪ್ರಧಾನ ಕಾರ್ಯದರ್ಶಿ ಆರ್.ಹನುಮೇಶ್ ಮತ್ತಿತರರು ಉಪಸ್ಥಿತರಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net