ನಿವೃತ್ತಿಯ ದಿನಗಣನೆಯಲ್ಲಿದ್ದ ಕನ್ನಡ ಉಪನ್ಯಾಸಕ ನಟರಾಜು ನಿಧನ

IMG-20230727-WA0569
Published on

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು-ಕೆಂಕೆರೆ ಸರ್ಕಾರಿ ಪಿಯು ಕಾಲೇಜಿನ ಕನ್ನಡ ಉಪನ್ಯಾಸಕ ಆರ್.ನಟರಾಜು(60)ಗುರುವಾರ ಸಂಜೆ ಸ್ವಗ್ರಾಮ ಚಿತ್ರದುರ್ಗ ಜಿ¯್ಲೆ, ಹೊಸದುರ್ಗ ತಾಲೂಕಿನ ಶ್ರೀರಾಂಪುರದಲ್ಲಿ ನಿಧನರಾದರು.

ಇದೇ ಜುಲೈ 31 ರಂದು ಸೇಚೆಯಿಂದ ವಯೋನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಸಮಾರಂಭಕ್ಕೆ ಕಾಲೇಜಿನಲ್ಲಿ ಸಿದ್ಧತೆ ಕೂಡ ನಡೆದಿತ್ತು. ಎರಡು ದಿನದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು.

ಕೋಲಾರ ಜಿಲ್ಲೆಯ ಚಿಂತಾಮಣಿ ಸರ್ಕಾರಿ ಪ್ರೌಢಶಾಲೆ, ಚಿಕ್ಕನಾಯಕನಹಳ್ಳಿ ತಾಲೂಕು ಬರಶಿಡ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ, ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಕಳೆದ ಐದು ವರ್ಷದಿಂದ ಹುಳಿಯಾರು ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪತ್ನಿ, ಮಗಳು, ಮಗನನ್ನು ಅಗಲಿದ್ದಾರೆ. ಶುಕ್ರವಾರ ಬೆಳಗ್ಗೆ ಶ್ರೀರಾಂಪುರದಲ್ಲಿ ಮೃತದೇಹದ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net