

ತುಮಕೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ವಿಶೇಷವಾಗಿ ತುರುವೇಕೆರೆ ತಾಲೂಕಿನಲ್ಲಿ ಚಿರತೆಗಳ ಓಡಾಟ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು ಚಿರತೆಗಳನ್ನು ಸುರಕ್ಷಿತವಾಗಿ ಸೆರೆ ಹಿಡಿಯಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿ ಮಂಗಳವಾರ ಚಿರತೆಗಳ ಸುರಕ್ಷತಾ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಎಲ್ಲಿಯಾದರೂ ಚಿರತೆಗಳ ಕುರುಹುಗಳು ಕಂಡು ಬಂದಲ್ಲಿ ಸಂಬAಧಪಟ್ಟ ವಲಯ ಅರಣ್ಯಾಧಿಕಾರಿಗಳಿಗೆ ತಕ್ಷಣವೇ ಸಹಾಯವಾಣಿ 1926ಗೆ ಕರೆ ಮಾಡಿ ಮಾಹಿತಿ ನೀಡಲು ವ್ಯಾಪಕ ಪ್ರಚಾರ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳ ಗ್ರೂಪ್‌ನಲ್ಲಿ ತಾವು ವಿವಿಧ ಕಡೆಗಳಲ್ಲಿ ಭೇಟಿ ನೀಡಿದ ಬಗ್ಗೆ ಜಿಪಿಎಸ್‌ನೊಂದಿಗೆ ಛಾಯಾಚಿತ್ರ ಹಂಚಿಕೊಳ್ಳುವ ಮೂಲಕ ವಿವರಗಳನ್ನು ತಿಳಿಸಬೇಕು.
ಉಪ ಅರಣ್ಯ ಸಂರಕ್ಷಣಾಧಿಕಾರಿತAಡಗಳನ್ನು ರಚಿಸಿ, ಕಾಲಕಾಲಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಅನುಪಮ ಇದ್ದರು.