

ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹೊಂದಿರುವ ಇಬ್ಬರು ಅಭ್ಯರ್ಥಿಗಳಿಗೆ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಈ ತರಬೇತಿಯು 2025ನೇ ದಿನದರ್ಶಿ(ಕ್ಯಾಲೆಂಡರ್)ಯ ಜನವರಿಯಿಂದ ಪ್ರಾರಂಭಗೊಂಡು ಡಿಸೆಂಬರ್ 2025ಕ್ಕೆ ಕೊನೆಗೊಳ್ಳಲಿದೆ. ದ್ವಿ-ಪ್ರತಿಯಲ್ಲಿ ಅರ್ಜಿ ಸಲ್ಲಿಸಲು ಅ.30ಕೊನೆಯ ದಿನ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,
ವಾರ್ತಾ ಭವನ, ತುಮಕೂರು. ಸಂಪರ್ಕಿಸಬಹುದು.