ಜಮ್ಮು-ಕಾಶ್ಮೀರ ಪ್ರವಾಸ : ಸಹಾಯವಾಣಿ ಸಂಖ್ಯೆ

helpline
Published on

ತುಮಕೂರು: ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದದ ಸಂಗತಿಯಾಗಿದೆ. ಭಯೋತ್ಪಾದಕ ದಾಳಿಯ ನಂತರ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಜಮ್ಮು-ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ರಾಜ್ಯದ ಪ್ರಯಾಣಿಕರ ವಿವರ ತಿಳಿಸಲು ಸಹಾಯವಾಣಿ ಸ್ಥಾಪಿಸಲಾಗಿದೆ.

ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು ಹಾಗೂ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ಸಂಬಂಧಿಕರು ಅಥವಾ ಪರಿಚಯಸ್ಥರು ಸಹಾಯವಾಣಿ 080- 43344334/ 43344335/ 43344336/ 43344342ಕ್ಕೆ ಪ್ರವಾಸಿಗರ ವಿವರವನ್ನು ನೀಡಬೇಕೆಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net