

ತುಮಕೂರು: ತುಮಕೂರು ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿಯಾಗುವ ವಿಶ್ವಾಸವಿದೆ, ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಟಿಕೆಟ್ ಕೇಳಿz್ದೆÃನೆ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದರು.
ನಗರದಲ್ಲಿ ಚುನಾವಣಾ ಕಚೇರಿ ಆರಂಭಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಸ್ಫರ್ಧಿಸುತ್ತಾರೆ ಎಂದು ಹೇಳಿದವರಾರು? ಈ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿಯಾಗುತ್ತೇನೆ ಎಂಬ ವಿಶ್ವಾಸವಿದೆ ಎಂದರು.
ಬಿಜೆಪಿಯಲ್ಲಿ ಕೊನೆಯ ಕ್ಷಣದವರೆಗೂ ಯಾರಿಗೆ ಟಿಕೆಟ್ ಎಂಬುದು ಯಾರೊಬ್ಬರಿಗೂ ತಿಳಿಯುವುದಿಲ್ಲ, ಎಸ್.ಪಿ.ಮುದ್ದಹನುಮೇಗೌಡ ಆತುರಪಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ಪ್ರತಿಕ್ರಿಯಿಸಿದರು.