

ತುಮಕೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ, ಪ್ರಾಮಾಣಿಕವಾಗಿ ನಿರಂತರ ಸಾಧನೆಯಲ್ಲಿ ತೊಡಗಿಸಿಕೊಂಡರೆ ಸಫಲತೆ ಕಾಣಬಹುದು ಎಂದು ಇಸ್ರೋ ವಿಜ್ಞಾನಿ ಕೆ.ಟಿ.ಸುಂದರಮೂರ್ತಿ ಹೇಳಿದರು.
ತುಮಕೂರಿನ ಗೊಲ್ಲಹಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ 18ನೇ ಬ್ಯಾಚ್ನ ಹಳೆ ವಿದ್ಯಾರ್ಥಿಗಳು ಬುಧವಾರ ಆಯೋಜಿಸಿದ್ದ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿ, ನವೋದಯ ವಿದ್ಯಾಲಯದ ಕಾರ್ಯ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಹನುಮಂತ ರೆಡ್ಡಿ ಮಾತನಾಡಿ, ಶಾಲೆಯ ಸುಂದರ ಪರಿಸರವನ್ನು ಅಂದಗೆಡದಂತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಿಸಿದರು.
ಪ್ರಾಂಶುಪಾಲೆ ಶ್ರೀಕಲಾ ಮಾತನಾಡಿ, ಹಳೆ ವಿದ್ಯಾರ್ಥಿಗಳ 18 ನೇ ಬ್ಯಾಚಿನ ವಿದ್ಯಾರ್ಥಿಗಳು 2024&25 ನೇ ಸಾಲಿನಲ್ಲಿ ಹಮ್ಮಿಕೊಂಡ ವೃತ್ತಿ ಮಾರ್ಗದರ್ಶನ ಶಿಬಿರ, ವೈದ್ಯಕಿಯ ಶಿಬಿರ ಮೊದಲಾದ ಸೇವಾ ಕಾರ್ಯಕ್ರಮಗಳ ಕುರಿತಂತೆ ಶ್ಲಾಘನೆ ವ್ಯಕ್ತಪಡಿಸಿದರು.
ಹಿರಿಯ ವಿದ್ಯಾರ್ಥಿನಿ, ವಿಶಾಖಪಟ್ಟಣಂ ಜಿಲ್ಲಾಧಿಕಾರಿ ಕಲ್ಪಶ್ರೀ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವಿಣ್ಕುಮಾರ್, ಶಾಲೆಯಲ್ಲಿ ಸೇವೆ ಸಲ್ಲಿಸಿದ ಉಪಪ್ರಾಂಶುಪಾಲರಾದ ಜಯಂತಿ ಗೋಪಾಲನ್, ಆದಿಲಕ್ಷಿ$್ಮ, ಶ್ರೀಜನಾರ್ದನ್ ಮತ್ತಿತರರು ಇದ್ದರು.
500ಕ್ಕೂ ಹೆಚ್ಚು ಹಿರಿಯ ವಿದ್ಯಾರ್ಥಿಗಳು ಆಗಮಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿಯನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.