

ತುಮಕೂರು: ಸಾಮಾಜಿಕ ಜಾಲತಣಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಿಯಬಿಡುವವರ ವಿರುದ್ಧ ಸಧ್ಯದಲ್ಲಿಯೇ ಕಠಿಣ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ಭರವಸೆ ನೀಡಿದರು.
ಸರ್ಕಾರ, ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳು, ಗಣ್ಯರ ಮೇಲೆ ಅನಾವಶ್ಯಕವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಕೆಲಸ ಇತ್ತೀಚೆಗೆ ವ್ಯಾಪಕವಾಗಿದೆ, ಇದರಿಂದ ಸಮಾಜದ ಸ್ವಾಸ್ಥö್ಯ ಹಾಳಾಗುತ್ತಿದ್ದು, ಗಂಭೀರ ಪರಿಣಾಮಗಳು ಸಮಾಜದ ಮೇಲೆ ಉಂಟಾಗುತ್ತಿದೆ ಎಂದರು ಕಳವಳ ವ್ಯಕ್ತಪಡಿಸಿದರು.