

ತುಮಕೂರು: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯವೈಶ್ಯ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಸಿಇಟಿ, ಎನ್‌ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಎಚ್‌ಡಿ ಯಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಬಯಸುವವರು kacdc.karnataka.gov.in ಮೂಲಕ ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕ, ಶಾರದಾದೇವಿನಗರ, ಜೆ.ಪಿ.ಸ್ಕೂಲ್ ಪಕ್ಕ, ಹನುಮಂತಪುರ ಮುಖ್ಯ ರಸ್ತೆ,, ತುಮಕೂರು. ದೂ.0816-2005008ಗೆ ಅಥವಾ ನಿಗಮದ ಸಹಾಯವಾಣಿ 9448451111 ಸಂಪರ್ಕಿಸಿ.