ತುಮಕೂರು: ಗುಬ್ಬಿ ತಾಲೂಕು ನಿಟ್ಟೂರು ಹೋಬಳಿ ಪುರ ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿಯ ರಥ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ಶೆಡ್ ನಲ್ಲಿ ನಿಲ್ಲಿಸಿದ್ದ ರಥಕ್ಕೆ ಯಾರೊ ದುಷ್ಕರ್ಮಿಗಳು ಬೆಂಕಿ ಇಟ್ಟಿರಬಹುದು ಎಂದು ಶಂಕಿಸಲಾಗಿದೆ. ಸುದ್ದಿ ತಿಳಿದ ಅಗ್ನಿಶಾಮಕ ದಳ ಬಂದು ಬೆಂಕಿ ನಂದಿಸುವಷ್ಟರಲ್ಲಿ ರಥ ಬಹುತೇಕ ಭಸ್ಮವಾಗಿದೆ.