

ತುಮಕೂರು: ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಕಂದಾಯ ಇಲಾಖೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗಾಗಿ ಸೆ.29ರಂದು ಜಿಲ್ಲೆಯ 67 ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭಕಲ್ಯಾಣ್ ಆದೇಶಿಸಿದ್ದು ಸೆಪ್ಟೆಂಬರ್ 29ರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.