

ತುಮಕೂರು: ತುಮಕೂರು ವಿವಿ ಮೌಲ್ಯಮಾಪನ ಕುಲಸಚಿವ ಹುದ್ದೆಗೆ ಕೆಎಎಸ್ ಅಧಿಕಾರಿ ಎನ್.ಆರ್.ಉಮೇಶ್‌ಚಂದ್ರ ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ. ಹುದ್ದೆಯಲ್ಲಿದ್ದ ಪ್ರೊ.ಪ್ರಸನ್ನಕುಮಾರ್ ಶಿವಮೊಗ್ಗ ವಿವಿಗೆ ವಾಪಸಾಗಲಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕೆಎಎಸ್ ಅಧಿಕಾರಿಗಳನ್ನು ವರ್ಗಾಹಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 207ರ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕುಣಿಗಲ್‌ನಲ್ಲಿ ಉಮೇಶ್‌ಚಂದ್ರ ಕರ್ತವ್ಯ ನಿರ್ವಹಿಸುತ್ತಿದ್ದರು.
ಸ್ಥಳ ನಿರೀಕ್ಷಣೆಯಲ್ಲಿದ್ದ ತಬಸ್ಸಮ್ ಜಹೇರಾ ಅವರನ್ನು ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ವರ್ಗಾಹಿಸಲಾಗಿದೆ.