ಸಂವಿಧಾನ ಬದಲಾಯಿಸಿದರೆ ದೇಶದಲ್ಲಿ ಕ್ರಾಂತಿ ಸಂಭವಿಸಲಿದೆ; ಸಚಿವ ಕೆಎನ್‌ಆರ್ ಆಕ್ರೋಶ

WhatsApp Image 2024-03-11 at 2.56.30 PM
Published on

ಮಧುಗಿರಿ: ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ತಿದ್ದುಪಡಿ ತರುವುದಾಗಿ ಬೊಬ್ಬೆಯೊಡೆಯುತ್ತಿದ್ದಾರೆ. ಸಂವಿಧಾನಕ್ಕೆ ಕೈಯಾಕಿದರೆ ದೇಶದಲ್ಲಿ ಕ್ರಾಂತಿ ನಡೆಯಲಿದೆ ಎಂದು ಸಹಕಾರ ಸಚಿವ ಕೆ.ಎನ್‌ರಾಜಣ್ಣ ಹೇಳಿದರು.

ಸಂಸದರೊಬ್ಬರು ಬಿಜೆಪಿಗೆ 400ಕ್ಕೂ ಹೆಚ್ಚು ಸೀಟು ಬಂದರೆ ಸಂವಿಧಾನ ತಿದ್ದುಪಡಿ ಮಾಡುವುದಾಗಿ ಬಹುರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕೂಡ ಮೌನವಾಗಿರುವ ಮೂಲಕ ಇದನ್ನು ಒಪ್ಪಿಕೊಂಡಿದ್ದು ಜನರು ಎಚ್ಚರಿಕೆಯಿಂದ ಮತ ಚಲಾಯಿಸಬೇಕು ಎಂದರು.

ಮಧುಗಿರಿ ತಾಲೂಕು ದೊಡ್ಡದಾಳವಟ್ಟದಲ್ಲಿ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಪೂಜೆ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಪರವಾಗಿ ಚುನಾವಣಾ ಪ್ರಚಾರ ಅರಂಭಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ಸಾಮಾಜಿಕ ಸಮಾನತೆ ತಂದುಕೊಟ್ಟಿರುವ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುವ ಸಂಸದ ಮನುಷ್ಯನೇ ಅಲ್ಲ, ಇಂತಹವರಿಗೆ ಯಾವುದೇ ಕಾರಣಕ್ಕೂ ಮತ ಚಲಾಯಿಸಬಾರದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net