

ತುಮಕೂರು: ಕರ್ನಾಟಕ ಲೋಕಸೇವಾ ಆಯೋಗ ಆ.27ರಂದು ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿರುವ ಗೆಜೆಟೆಡ್ ಪ್ರೋಬೇಫಿನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ 6065 ಪರೀಕ್ಷಾರ್ಥಿಗಳು ಹಾಜರಾಗಲಿದ್ದಾರೆ .
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಭಾರತೀಯ ನಾಗರೀಕ ಸುರಕ್ಷತಾ ಸಂಹಿತೆಯ ಕಲಂ 163ರಡಿ ನಿಫಿೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ನಿಷೇಧಿತ ಪ್ರದೇಶದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಪರೀಕ್ಷೆಯನ್ನು ಯಾವುದೇ ಲೋಪದೋಫಿಗಳಿಲ್ಲದಂತೆ ನಡೆಸಲು ಗ್ರೂಪ್-ಎ ವೃಂದದ (ಕೆ.ಎ.ಎಸ್. ಶ್ರೇಣಿಯ ಉಪವಿಭಾಗಾಧಿಕಾರಿಗಳು) ಅಧಿಕಾರಿಯನ್ನು ಪ್ರತಿ ನಾಲ್ಕು ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಇತರೆ ಗೌಪ್ಯ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಲು ಒಟ್ಟು 5 ಮಾರ್ಗಗಳ ಮಾರ್ಗಾಧಿಕಾರಿಗಳ ತಂಡವನ್ನು ರಚಿಸಲಾಗಿದ್ದು, ಎಲ್ಲ ಮಾರ್ಗಗಳಿಗೂ ತಹಶೀಲ್ದಾರ್ಗಳನ್ನು ಮಾರ್ಗಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಎಲ್ಲಾ 16 ಪರೀಕ್ಷಾ ಕೇಂದ್ರಗಳಿಗೂ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಸ್ಥಳಿಯ ನಿರೀಕ್ಷಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು (ಮಹಿಳಾ ಮತ್ತು ಪುರುಫಿ) ಹಾಗೂ ಗೌಪ್ಯ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗುವ ವಾಹನಗಳಿಗೆ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮವಹಿಸಲಾಗಿದೆ.
ತುಮಕೂರು ನಗರದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆಯಲು ರಾಜ್ಯದ ಇತರೆ ಜಿಲ್ಲೆಗಳಿಂದ ಅಭ್ಯರ್ಥಿಗಳು ಆಗಮಿಸಲಿರುವ ಹಿನ್ನಲೆಯಲ್ಲಿ ಪರೀಕ್ಷಾ ದಿನದಂದು ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳು ಇರುವ ಮಾರ್ಗಗಳಲ್ಲಿ ಹೆಚ್ಚುವರಿಯಾಗಿ ನಗರ ಸಾರಿಗೆಗಳು 3 ರಿಂದ 4 ಮಾರ್ಗಗಳಲ್ಲಿ ಸಂಚರಿಸುವಂತೆ ಕ್ರಮವಹಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಕರಿಗೆ ಸೂಚನೆ ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಅವಧಿಯಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮವಹಿಸಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.