ಸಹಾಯ ಕೇಂದ್ರ ತೆರೆಯಲು ಅರ್ಜಿ

KSOU
Published on

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ಜಿಲ್ಲೆಯ ನಗರ, ಪ್ರತಿ ತಾಲ್ಲೂಕು ಹಾಗೂ ಹೋಬಳಿ ಕೇಂದ್ರದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರ(ಅಧ್ಯಯನ ಕೇಂದ್ರ)ಗಳನ್ನು ತೆರೆಯಲು ಅರ್ಜಿ ಆಹ್ವಾನಿಸಿದೆ.

ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಜ.18ರೊಳಗೆ ಕರಾಮುವಿಯ ಅಧಿಕೃತ ವೆಬ್​ ಸೈಟ್​ ಮೂಲಕ ಅರ್ಜಿ ಸಲ್ಲಿಸಿ ಅರ್ಜಿಯ ಪ್ರತಿಯನ್ನು ಡೀನ್​(ಅಧ್ಯಯನ ಕೇಂದ್ರ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-. ಇವರಿಗೆ ಸಲ್ಲಿಸಬೇಕು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ.

ಮಾಹಿತಿಗೆ ಕರಾಮುವಿ, ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್​, ರಾಜೀವ್​ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು. ದೂ.-0816 -2955580, ಮೊ. 9844506629 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net