

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024-&25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರಥಮ ವರ್ಷದ ವಿವಿಧ ಸ್ನಾತಕ, ಸ್ನಾತಕೋತ್ತರ ಪದವಿ ಕೋರ್ಸ್ಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ಪೂರ್ವ, ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವವರು ನ.15 ರೊಳಗೆ ಅರ್ಜಿ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ.(ಜನರಲ್ ಅಂಡ್ ಐಟಿ), ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಅಥವಾ ದೂ.0816- 2955580, ಮೊ.9844506629, 9886112434, 7349474339 ಸಂಪರ್ಕಿಸಿ.