

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಜುಲೈ ಆವೃತ್ತಿ ಪ್ರಥಮ ವರ್ಷದ ವಿವಿಧ ಸ್ನಾತಕ, ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ನಾತಕ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವವರು ಬಿಎ, ಬಿ.ಕಾಂ, ಬಿಬಿಎ, ಬಿಸಿಎ, ಬಿಎಲ್ಐಎಸ್ಸಿ, ಬಿಎಸ್ಡಬ್ಲ್ಯೂ, ಬಿಎಸ್ಸಿ., ಎಂಎ, ಎಂಸಿಜೆ, ಎಂಕಾಂ, ಎಂಸಿಎ, ಎಂಎಸ್ಡಬ್ಲ್ಯೂ, ಎಂಎಲ್ಐಎಸ್ಸಿ, ಎಂಎಸ್ಸಿ, ಎಂಬಿಎ, ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸ್ಗಳ ಪ್ರವೇಶಾತಿಗೆ ನವೆಂಬರ್ 15ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಅಥವಾ ದೂ.0816 -2955580, ಮೊ.9844506629, 9886112434, 7349474339 ಸಂಪರ್ಕಿಸಿ.