ಕರಾಮುವಿ ಪ್ರಾದೇಶಿಕ ಕೇಂದ್ರದಿಂದ ಉನ್ನತ ಶಿಕ್ಷಣಕ್ಕೆ ಮುಕ್ತ ಅವಕಾಶ

KSOU
Published on

 ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು*"ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ"* ಎಂಬ ಘೋಷವಾಕ್ಯದೊಂದಿಗೆ 1996ರಲ್ಲಿ ಸ್ಥಾಪನೆಯಾಗಿ, 18 ವರ್ಷದಿಂದ 80 ವರ್ಷದ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ ನೀಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ವಿಶ್ವವಿದ್ಯಾನಿಲಯವು ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ 34 ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯುಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಕೊಡುವಲ್ಲಿ ಮುಂಚುಣಿಯಲ್ಲಿದೆ.

ಹೀಗಾಗಿ, 10+2 (ಸ್ನಾತಕ ಪೂರ್ವ)., 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು. ಕರಾಮುವಿ ಯುಜಿಸಿ ಮಾನ್ಯತೆ ಪಡೆದಿರುವ ವಿವಿಧ 64 ಸ್ನಾತಕ/ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ನೀಡುತ್ತಿದೆ.

ಕರಾಮುವಿಯಲ್ಲಿ ಸ್ನಾತಕ/ಸ್ನಾತಕೋತ್ತರ ಪದವಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು, ರಾಜ್ಯ/ಕೇಂದ್ರ ಸರ್ಕಾರದ ವಿವಿಧ ಶ್ರೇಣಿಯ ಸರ್ಕಾರಿ ಹುದ್ದೆ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಕೆಎಎಸ್, ಐಎಎಸ್, ಪೊಲೀಸ ಅಧಿಕಾರಿಗಳಾಗಿ, ಅಧ್ಯಾಪಕರಾಗಿ, ಶಿಕ್ಷಕರಾಗಿ ಮತ್ತು ಖಾಸಗಿ ಕಂಪನಿಗಳಲ್ಲಿ ಕರಾಮುವಿಯ ವಿದ್ಯಾರ್ಥಿಗಳು ಆಯ್ಕೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ತುಮಕೂರಿನಲ್ಲಿ ಸುಸಜ್ಜಿತ ಕರಾಮುವಿ ಪ್ರಾದೇಶಿಕ ಕೇಂದ್ರ:

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತುಮಕೂರಿನ ನಗರದಲ್ಲಿ 2010ರಲ್ಲಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದೆ. ಸದರಿ ಕೇಂದ್ರವು 2018ರಲ್ಲಿ ತುಮಕೂರಿನ ಗಂಗಸಂದ್ರ ಮುಖ್ಯ ರಸ್ತೆ, ರಾಜೀವ್ ಗಾಂಧಿನಗರ, ಮೇಳೆಕೋಟೆಯಲ್ಲಿ ಸ್ವಂತ ಕಟ್ಟಡ ಹೊಂದಿದ್ದು, ಈ ಕಟ್ಟಡ ಮೂರು ಅಂತಸ್ತು ಇದ್ದು, 13 ಉಪನ್ಯಾಸ ಕೊಠಡಿಗಳನ್ನು, ಗ್ರಂಥಾಲಯ ವಿಭಾಗವನ್ನು ಹಾಗೂ ಇತರೆ ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿದ್ದು ಮತ್ತು ಈ ಕಚೇರಿಯಲ್ಲಿ ನುರಿತ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳಿಗೆ ಕರಾಮುವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತದೆ.

ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಕಳೆದ 5 ವರ್ಷಗಳಲ್ಲಿ ಅಂದಾಜು ನಾಲ್ಕು ಸಾವಿರ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿರುತ್ತಾರೆ. 2022-23ರ ಜುಲೈ ಮತ್ತು ಜನವರಿ ಎರಡು ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ 1180 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, 2023-24ನೇ ಕೇವಲ ಜುಲೈ ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ 800 ವಿದ್ಯಾರ್ಥಿಗಳು ಪ್ರವೇಶಾತಿಯನ್ನು ಪಡೆದಿರುತ್ತಾರೆ. 

ಹೆಚ್ಚಿನ ವಿವರಗಳಿಗಾಗಿ:

ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net