ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

KUNI_ACCDENT
Published on

ಕುಣಿಗಲ್: ರಸ್ತೆ ಬದಿಯಲ್ಲಿ ಬೈಕ್ ತಳ್ಳಿಕೊಂಡು ಹೋಗುತ್ತಿದ್ದ ಯುವಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎಡಿಯೂರು ಹೋಬಳಿ ನಾಗೇಗೌಡನಪಾಳ್ಯ ಬಳಿ ಸೋಮವಾರ ಸಂಭವಿಸಿದೆ.

ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರಹಳ್ಳಿ ಗ್ರಾಮದ ಉಮೇಶ (25) ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ದೇವೇಗೌಡನದೊಡ್ಡಿಯ ಅವಿನಾಶ್ (25) ಮೃತರು.

ಉಮೇಶ್, ಅವಿನಾಶ್ ಇಬ್ಬರೂ ಸಂಬಂಧಿಕರಾಗಿದ್ದು, ಸೋಮವಾರ ಹಂಗರಹಳ್ಳಿ ಗ್ರಾಮದಿಂದ ಬೈಕ್‌ನಲ್ಲಿ ತಾಲೂಕಿನ ಪ್ರಸಿದ್ದ ಎಡಿಯೂರು ಸಿದ್ದಲಿಂಗೇಶ್ವರಸ್ವಾಮಿ ದೇವಾಲಯಕ್ಕೆ ತೆರಳುತ್ತಿದ್ದರು ಆದರೆ, ಮಾರ್ಗ ಮಧ್ಯೆ ಬೈಕ್‌ನ ಪೆಟ್ರೋಲ್ ಖಾಲಿಯಾದ ಕಾರಣ ಉಮೇಶ್ ಹಾಗೂ ಅವಿನಾಶ್ ಬೈಕ್‌ಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಅನ್ನು ರಸ್ತೆ ಬದಿಯಲ್ಲಿ ತೆಳ್ಳಿಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಬೈಕ್ ಗೆ ಹಿಂಬದಿಗೆ ಡಿಕ್ಕಿ ಹೊಡೆದ ಕಾರಣ ಈ ಅವಘಡ ಸಂಬವಿಸಿದೆ ಎನ್ನಲಾಗಿದೆ, ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net