ಕಾರ್ಮಿಕರಿಗೆ ವೇತನ ಸಹಿತ ರಜೆ

vote
Published on

ತುಮಕೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ದಿನದಂದು ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಮಿಕರು ಮತದಾನ ಮಾಡಲು ಅನುವಾಗುವಂತೆ ವೇತನ ಸಹಿತ ರಜೆ ನೀಡಬೇಕೆಂದು ಪಾಲಿಕೆ ಆಯುಕ್ತ ಬಿ.ವಿ ಅಶ್ವಿಜಾ ಎಲ್ಲಾ ಅಂಗಡಿ, ವಾಣಿಜ್ಯ ಸಂಸ್ಥೆ, ಕಾರ್ಖಾನೆ ಮತ್ತು ಇತರೆ ಉದ್ಯೋಗದಾತ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ.

ಅಂಗಡಿ, ವಾಣಿಜ್ಯ ಸಂಸ್ಥೆ, ಕಾರ್ಖಾನೆ ಮತ್ತು ಇತರೆ ಉದ್ಯೋಗದಾತ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಏಪ್ರಿಲ್ 26ರಂದು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅವಕಾಶ ನೀಡದಿದ್ದಲ್ಲಿ ಸಂಬAಧಪಟ್ಟವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net