

ತುಮಕೂರು: ಕೃಷಿ ನೀರಾವರಿ ಪಂಪ್ಸೆಟ್ ಬಳಕೆದಾರರು ನೀರಾವರಿ ಪಂಪ್ಸೆಟ್ನ ವಿದ್ಯುತ್ ಆರ್ಆರ್ ಸಂಖ್ಯೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಕೋರಿದ್ದಾರೆ.
ಕೃಷಿ ಪಂಪ್ಸೆಟ್ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವವರ ಆಧಾರ್ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, ಛಾಪಾಕಾಗದ ಹಾಗೂ ಪಹಣಿಯಲ್ಲಿ ಜಂಟಿ ಖಾತೆಯಾಗಿದ್ದರೆ ಉಳಿದವರ ಒಪ್ಪಿಗೆ ಪತ್ರ, ಕ್ರಯ ಪತ್ರದ ದಾಖಲೆಯನ್ನು ಸಮೀಪದ ಬೆಸ್ಕಾಂ ಶಾಖಾ ಕಚೇರಿ ಅಥವಾ ಸಂಬಂಧಿಸಿದ ಪವರ್ ಮ್ಯಾನ್ ಅಥವಾ ಮೀಟರ್ ರೀಡರ್ಗಳಿಗೆ ಸಲ್ಲಿಸಿ ಹಾಲಿ ಆರ್.ಆರ್.ಸಂಖ್ಯೆಯಲ್ಲಿರುವ ಹೆಸರನ್ನು
ಬದಲಾವಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.