ವಿದ್ಯುತ್ ಉತ್ಪಾದನೆ ಕಡಿಮೆಯಾಗಿದ್ದು ಲೋಡ್‌ಶೆಡ್ಡಿಂಗ್ ಅನಿವಾರ್ಯ: ಡಾ.ಜಿ.ಪರಮೇಶ್ವರ

Param_Loadshedding
Published on

ತುಮಕೂರು: ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕಡಿಮೆ ಆಗಿರುವುದರಿಂದ ಲೋಡ್‌ಶೆಡ್ಡಿಂಗ್ ಅನಿವಾರ್ಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿಯಮಿತ ಲೋಡ್‌ಶೆಡ್ಡಿಂಗ್‌ಗೆ ಗೃಹಜ್ಯೋತಿ ಕಾರಣವಲ್ಲ, ಮಳೆ ಕ್ಷೀಣಿಸಿರುವುದರಿಂದ ಜಲ ವಿದ್ಯುತ್ ಉತ್ಪಾದನೆ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸಹ ಕಡಿಮೆ ಆಗಿದೆ. ಅದನ್ನು ನಿರ್ವಹಣೆ ಮಾಡಲಿಕ್ಕೆ ಲೋಡ್‌ಶೆಡ್ಡಿಂಗ್ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net