ಕೈಮಗ್ಗ ನೇಕಾರರಿಗೆ ಸಾಲ ಸೌಲಭ್ಯ

Handloom
ಕೈಮಗ್ಗ ನಿಗಮದ ನೇಕಾರಿಕೆ ಮಾಡುತ್ತಿರುವ ಮಹಿಳೆ.
Published on

ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಿದೆ.

ಯೋಜನೆಯಡಿ ಕೈಮಗ್ಗ ನೇಕಾರರಿಗೆ ಕೈಮಗ್ಗ ನೇಯುವ ಚಟುವಟಿಕೆಗಳಿಗಾಗಿ ರಾಷ್ಟ್ರೀಕೃತ ಬ್ಯಾಂಕುಗಳಿಂದ 50,000 ರೂ.ಗಳಿಂದ 2ಲಕ್ಷ ರೂ.ಗಳವರೆಗೆ ಆರ್ಥಿಕ ಸಾಲ ಸೌಲಭ್ಯ ನೀಡಲಾಗುವುದು.

ಆಸಕ್ತ ಕೈಮಗ್ಗ ನೇಕಾರರು ನಿಗಧಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕ, ಕೈಮಗ್ಗ ಮತ್ತು ಜವಳಿ ಇಲಾಖೆ,

5ನೇ ಮುಖ್ಯರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು. ದೂ.0816- 2275370 ಅಥವಾ ಮೊ.9980208292 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net