ಲಾರಿ, ಸ್ಕೂಟರ್ ಡಿಕ್ಕಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

WEEBBB
Published on

ಮಧುಗಿರಿ : ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಪುರವರ ಗ್ರಾಪಂ ವ್ಯಾಪ್ತಿಯ ದೊಡ್ಡಹೊಸಳ್ಳಿ ಬಳಿ ಸ್ಕೂಟರ್ ಮತ್ತು ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಪುರುಷೋತ್ತಮ(12) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿದ್ಯಾರ್ಥಿ ಶಾಲೆಗೆ ಹೋಗಿ ವಾಪಾಸ್ಸಾಗುವಾಗ ಘಟನೆ ನಡೆದಿದೆ.

ವಿದ್ಯಾರ್ಥಿ ಬ್ಯಾಲ್ಯ ಗ್ರಾಪಂ ವ್ಯಾಪ್ತಿಯ ಮುದ್ದಯ್ಯನ ಪಾಳ್ಯದ ತ್ಯಾಗರಾಜು ಅವರ ಪುತ್ರನಾಗಿದ್ದು, ಬ್ಯಾಲ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.‌

ಎಎಸ್ಪಿ ಅಬ್ದುಲ್ ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೊಡಿಗೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net