

ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಕ್ಕಳ ದಿನಾಚರಣೆ- ಅಂಗವಾಗಿ ಬಾಲಕರಿಗೆ "ಹೊಯ್ಸಳ' ಮತ್ತು ಬಾಲಕಿಯರಿಗೆ "ಕೆಳದಿ ಚೆನ್ನಮ್ಮ' ಶೌರ್ಯ ಪ್ರಶಸ್ತಿ ಪ್ರದಾನ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಪ್ರಾಣದ ಭಯತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 06-ರಿಂದ 18 ವರ್ಷ (2006ರ ಆಗಸ್ಟ್ 1ರಂದು ಹಾಗೂ ನಂತರ ಜನಿಸಿದ)ದೊಳಗಿನ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಾಹಸ ಪ್ರದರ್ಶಿಸಿದ ಪ್ರಕರಣ 2023ರ ಆಗಸ್ಟ್ 1 ರಿಂದ 2024ರ ಜುಲೈ 1ರೊಳಗೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಅರ್ಜಿ ನಮೂನೆ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ತುಮಕೂರು, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ, ಯುವಜನ ಸೇವೆ ಮತ್ತು ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕತಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕಚೇರಿಯಿಂದ ಪಡೆದು ಕನ್ನಡದಲ್ಲಿಯೇ ಭರ್ತಿ ಮಾಡಿ ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು. ಇವರಿಗೆ ಸೆ.27ರೊಳಗೆ ಸಲ್ಲಿಸಬಹುದು.