ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ

application
Published on

ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾವುದೇ ಕ್ಷೇತ್ರದಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಪ್ರತಿ ಕ್ಷೇತ್ರದಲ್ಲಿ ಇಬ್ಬರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.


ಪ್ರಶಸ್ತಿ 10000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿಬೇಕು. ಅರ್ಜಿಯನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.


ಅರ್ಜಿಯನ್ನು ಸೆಪ್ಟೆಂಬರ್​ 30ರೊಳಗಾಗಿ ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು. ಇವರಿಗೆ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net