ತುಮಕೂರಿನಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆ

siridhanya
Published on

ತುಮಕೂರು: ಕೃಷಿ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ-2024ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಡಿ.12ರಂದು ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆ ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿದ್ದು ಕೃಷಿ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.

ಜಿಲ್ಲಾ ಮಟ್ಟಕ್ಕೆ ಪ್ರಥಮ ಬಹುಮಾನವಾಗಿ ಸಿಹಿ ತಿನಿಸು ಮತ್ತು ಖಾರ ತಿನಿಸಿಗೆ ತಲಾ 5000ರೂ. ಬಹುಮಾನವಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರು ಡಿ.23ರಂದು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು.

ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ದೂ.0816 2278474, ಮೊ.8277932926 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net