

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಆಸಕ್ತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ಅಭ್ಯರ್ಥಿಗಳು
ಆಗಸ್ಟ್ 31ರೊಳಗೆ ಜಾಲತಾಣ ಮೂಲಕ ಸಲ್ಲಿಸಿದ ಅರ್ಜಿ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ನೀಡಬೇಕು.
ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇಂದಿರಾಕಾಲೇಜು ಮುಂಭಾಗ, ಉಪ್ಪಾರಹಳ್ಳಿ ಇವರನ್ನು ಸಂಪರ್ಕಿಸಿ.