

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರದಲ್ಲಿ ಜನವರಿ 10ರಂದು ಮಿನಿ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗ ಮೇಳಕ್ಕೆ ತುಮಕೂರಿನ ಹೆಸರಾಂತ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ (ಎಲ್ಲಾ ಟ್ರೇಡ್), ಡಿಪ್ಲೊಮಾ, ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು.
ಆಸಕ್ತ 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. NCS ( www.ncs.gov.in) ವೆಬ್ ಪೋರ್ಟಲ್‌ನಲ್ಲಿ ಉದ್ಯೋಗಾಕಾಂಕ್ಷಿ ಆಗಿ ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಅರ್ಹ ಅಭ್ಯರ್ಥಿಗಳು ಜ.10ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ತುಮಕೂರು. ಇಲ್ಲಿ ಬಯೋಡೇಟಾ ಹಾಗೂ ಗುರುತಿನ ಚೀಟಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಮಾಹಿತಿಗೆ ದೂ.0816 2278488 ಸಂಪರ್ಕಿಸಿ.