ಮಾಧುಸ್ವಾಮಿ ವಿಧಾನ ಪರಿಷತ್ ಪ್ರವೇಶಕ್ಕೆ ಜಿಲ್ಲೆಯಲ್ಲಿ ಅಪಸ್ವರ!?

JCM
Published on

ತುಮಕೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಸದಸ್ಯರ ಆಯ್ಕೆ ಸಂಬAಧವಾಗಿ ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಜಿಲ್ಲೆಯಲ್ಲಿಂದಲೂ ಅವಕಾಶಕ್ಕಾಗಿ ಲಾಬಿ ಆರಂಭವಾಗಿದೆ.

ಉತ್ತಮ ಸಂಸದೀಯ ಪಟು ಎಂಬ ಹೆಗ್ಗಳಿಕೆ ಹೊಂದಿರುವ ಬಿಜೆಪಿ ಹಿರಿಯ ನಾಯಕ ಜೆ.ಸಿ.ಮಾಧುಸ್ವಾಮಿ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರವನ್ನು ಕಟ್ಟಿ ಹಾಕಬೇಕು ಎಂಬ ಆಲೋಚನೆ ಬಿಜೆಪಿ ವಲಯದಿಂದಲೇ ಕೇಳಿಬಂದಿದ್ದು ಪರ, ವಿರೋಧದ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಸುಲಭವಾಗಿ ಪಡೆಯಲು ಅವಕಾಶವಿದ್ದು ಗಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಅವಕಾಶ ಮಾಡಿಕೊಟ್ಟು ಲಿಂಗಾಯತ ಸಮುದಾಯದ ವಿಶ್ವಾಸ ಉಳಿಸಿಕೊಳ್ಳಲು ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಉಸ್ತುವಾರಿಯಾಗಿದ್ದ ಮಾಧುಸ್ವಾಮಿ ಪಕ್ಷದ ಅಭ್ಯರ್ಥಿ ಪರವಾಗಿ ಬಿಡುವಿಲ್ಲದಂತೆ ಪ್ರಚಾರ ನಡೆಸಿದ್ದರು. ಶಿವಮೊಗ್ಗ, ಚಿತ್ರದುರ್ಗ, ಹಾಸನದಲ್ಲಿಯೂ ಮೈತ್ರಿ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದು ಮಾಧುಸ್ವಾಮಿ ತುಮಕೂರು ಕ್ಷೇತ್ರದಲ್ಲಿ ಮಾತ್ರ ಮೌನವಾಗಿದ್ದರು.

ಜೆಸಿಎಂಗೆ ಸ್ಥಳೀಯ ಶಾಸಕರ ವಿರೋಧ!?

ವಿಧಾನ ಪರಿಷತ್ ಸ್ಥಾನಕ್ಕೆ ಜೆ.ಸಿ.ಮಾಧುಸ್ವಾಮಿ ಹೆಸರು ಕೇಳಿಬಂದಿz್ದೆÃ ತಡ ಜಿಲ್ಲಾ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿಲ್ಲ ಎಂಬುದನ್ನೇ ಮುಂದಿಟ್ಟುಕೊAಡು ಅವರಿಗೆ ಅವಕಾಶ ನೀಡಬಾರದು ಎಂದು ಜಿಲ್ಲೆಯ ಇಬ್ಬರು ಶಾಸಕರು, ಪಕ್ಷದ ಪ್ರಮುಖರು ರಾಜ್ಯ ನಾಯಕರಿಗೆ ಮನವಿ ಮಾಡಿದ್ದಾರೆ ಎಂಬ ಗುಸುಗುಸು ಕೇಳಿಬಂದಿದೆ.
ಆದರೆ, ಜೆ.ಸಿ.ಮಾಧುಸ್ವಾಮಿ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಲು ಖುದ್ದು ಬಿ.ಎಸ್.ಯಡಿಯೂರಪ್ಪ ಆಸಕ್ತಿ ವಹಿಸಿರುವುದು ಕದನ ಕುತೂಹಲ ಹೆಚ್ಚಿಸಿದೆ.

ಕಾಂಗ್ರೆಸ್‌ನಲ್ಲಿಯೂ ಲಾಬಿ ಜೋರು:

ಸಂಖ್ಯಾ ಬಲ ಹೆಚ್ಚಿಸಿಕೊಂಡಿರುವ ಕಾಂಗ್ರೆಸ್ ಪಕ್ಷದಲ್ಲಿ ಏಳು ಸ್ಥಾನಗಳನ್ನು ಗೆಲ್ಲಲು ಅವಕಾಶವಿದ್ದು ತುಮಕೂರು ಜಿಲ್ಲೆಯಿಂದಲೂ ಅವಕಾಶಕ್ಕಾಗಿ ವರಿಷ್ಠರ ಮುಂದೆ ಲಾಬಿ ನಡೆಯಲಾರಂಭಿಸದೆ.
ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದ ಮುರಳೀಧರ ಹಾಲಪ್ಪ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಭೇಟಿಯಾಗಿ ಕುಂಟಿಚಿಗ ಸಮುದಾಯಕ್ಕೆ ಪರಿಷತ್‌ನಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕಾಡುಗೊಲ್ಲ, ಮಾದಿಗ ಸಮುದಾಯಕ್ಕೂ ಜಿಲ್ಲೆಯಲ್ಲಿ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ ಹಾಗಾಗಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಇವೆರೆಡೂ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ಕೂಗು ಎದ್ದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net