ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂ.3ರಂದು ಮತದಾನ

MLC-election-1
Published on

ತುಮಕೂರು: ವೈ.ಎ.ನಾರಾಯಣಸ್ವಾಮಿ ಅಧಿಕಾರವಧಿ ಅಂತ್ಯವಾಗುವ ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಚುನಾವಣಾ ಆಯೋಗ ಪ್ರಕಟಿಸಿದೆ.

ವೇಳಾಪಟ್ಟಿಯನ್ವಯ ಮೇ.9ರಂದು ಅಧಿಸೂಚನೆ ಹೊರಡಿಸಲಾಗುವುದು. ಚುನಾವಣಾ ನಾಮಪತ್ರ ಸಲ್ಲಿಸಲು ಮೇ.16 ಕಡೆಯ ದಿನವಾಗಿದ್ದು, ಮೇ.17ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲಿಸಲಾಗುವುದು.

ನಾಮಪತ್ರ ಹಿಂಪಡೆಯಲು ಮೇ.20ರಂದು ಕಡೆಯ ದಿನವಾಗಿದ್ದು, ಜೂ.3ರಂದು ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಜೂ.6ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮೇ.6 ಕಡೆಯ ದಿನವಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಿಚ್ಛಿಸುವ ಶಿಕ್ಷಕ ಮತದಾರರು ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರಬೇಕು ಹಾಗೂ 2023ರ ನವೆಂಬರ್ 1ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಕನಿಷ್ಠ 3 ವರ್ಷಗಳಷ್ಟು ಪ್ರೌಢಶಾಲೆಗಿಂತ ಕಡಿಮೆಯಲ್ಲದ ದರ್ಜೆಯಲ್ಲಿ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರಬೇಕು.

ಖಾಯಂ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅರೆಕಾಲಿಕ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net