

ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಸಂಸದ ಪ್ರಜ್ವಲ್‌ರೇವಣ್ಣ ಪೋಟೋ ಹಾಕಿಕೊಂಡು ಮತ ಕೇಳಲಿ, ನಮ್ಮದೇನೂ ಅಭ್ಯಂತರವಿಲ್ಲ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ಬಾಬು ವ್ಯಂಗ್ಯವಾಡಿದರು.
ನಗರದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಈ ಎರಡೂ ಪಕ್ಷಗಳ ಮೈತ್ರಿಗೆ ಪ್ರಬುದ್ಧ ಶಿಕ್ಷಕ ಮತದಾರರು ಉತ್ತರ ನೀಡಿದ್ದಾರೆ. ಇನ್ನುಳಿದ ಚುನಾವಣೆಗಳಲ್ಲಿ ಪ್ರಜ್ವಲ್ ಫೋಟೋ ಹಾಕಿಕೊಂಡು ಮತ ಕೇಳಲು ಹೋಗಲಿ ಎಂದರು.
ನಾನು, ಎಸ್.ಆರ್.ಶ್ರೀನಿವಾಸ್, ಮಧು ಬಂಗಾರಪ್ಪ, ಎಂ.ಸಿ.ನಾಣಯ್ಯ, ಪಿ.ಜಿ.ಆರ್. ಸಿಂಧ್ಯಾ ಅವರನ್ನೆಲ್ಲಾ ಎಚ್.ಡಿ.ಕುಮಾರಸ್ವಾಮಿ ಪಕ್ಷದಿಂದ ಆಚೆ ಕಳುಹಿಸುವಂತಹ ವಾತಾವರಣ ಸೃಷ್ಠಿ ಮಾಡಿದರು. ನಾವ್ಯಾರು ನಾವಾಗಿಯೇ ಆಚೆ ಬಂದವರಲ್ಲ ಎಂದು ಜೆಡಿಎಸ್‌ನಿಂದ ಶಾಸಕರಾಗಿದ್ದ ರಮೇಶ್‌ಬಾಬು ಹೇಳಿದರು.
ಜೆಡಿಎಸ್‌ನಲ್ಲಿ ಕುಮಾರಸ್ವಾಮಿರವರಿಗಿಂತ ನಾನೇ ಸೀನಿಯರ್. ಅವರು ನಡೆಸಿಕೊಂಡ ರೀತಿಯಿಂದ ಎಲ್ಲರೂ ಬೇಸರಗೊಂಡು ಜೆಡಿಎಸ್ ಪಕ್ಷವನ್ನು ಬಿಟ್ಟು ಬಂದಿz್ದೆÃವೆ ಎಂದು ಸ್ಪಷ್ಟಪಡಿಸಿದರು.
ಆಗ್ನೇಯ ಶಿಕ್ಷಕ ಕ್ಷೇತ್ರದಲ್ಲಿ 23,514 ಮಂದಿ ಮತದಾರರು ನೋಂದವಣೆಯಾಗಿದ್ದು, ತುಮಕೂರು ಜಿಲ್ಲೆಯಿಂದ 7599, ಚಿತ್ರದುರ್ಗ ಜಿಲ್ಲೆಯಿಂದ 4615, ಕೋಲಾರ ಜಿಲ್ಲೆಯಿಂದ 4149, ದಾವಣಗೆರೆ ಜಿಲ್ಲೆಯಿಂದ 3984, ಚಿಕ್ಕಬಳ್ಳಾಪುರ ಜಿಲ್ಲೆಯಿಂದ 3510 ಮತದಾರರು ನೋಂದಾಯಿಸಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಷಣ್ಮುಖಪ್ಪ, ದಿವಾಕರ್, ಲೋಕೇಶ್, ಸುಜಾತ ಇದ್ದರು.