ಅಬಕಾರಿ ಅಕ್ರಮ ತಡೆಯಲು ಸಹಾಯವಾಣಿ

helpLine
Published on

ತುಮಕೂರು: ಶಿಕ್ಷಕರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆ ಹಿನ್ನಲೆಯಲ್ಲಿ ಅಬಕಾರಿ ಅಕ್ರಮ ತಡೆಗಟ್ಟಲು ಅಬಕಾರಿ ಇಲಾಖೆ ಜಿಲ್ಲಾ ಮಟ್ಟದಲ್ಲಿ ನಿಯಂತ್ರಣಾ ಕೊಠಡಿ ಸ್ಥಾಪಿಸಿದೆ.

ಸಾರ್ವಜನಿಕರು ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ತಯಾರಿಕೆ, ಶೇಖರಣೆ, ಸಾಗಾಣಿಕೆ, ಮಾರಾಟ ಹಾಗೂ ಅಕ್ರಮ ಮದ್ಯ ತಯಾರಿಕಾ ವಸ್ತುಗಳು ಮತ್ತು ಗಾಂಜಾ, ಅಫೀಮು, ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳಂತಹ ಅಕ್ರಮಗಳು ಕಂಡು ಬಂದಲ್ಲಿ ದೂರು ನೀಡಬಹುದು.

ಅಬಕಾರಿ ಉಪ ಅಯುಕ್ತ ಕಛೇರಿಯಲ್ಲಿ ತೆರೆಯಲಾಗಿರುವ ನಿಯಂತ್ರಣಾ ಕೊಠಡಿ ಟೋಲ್ ಫ್ರೀ ಸಂಖ್ಯೆ:18004255440ಕ್ಕೆ ಅಥವಾ ಕರ್ನಾಟಕ ರಾಜ್ಯ ಬೆಂಗಳೂರು ಕೇಂದ್ರ ಅಬಕಾರಿ ಆಯುಕ್ತರ ಕಚೇರಿ ಟೋಲ್ ಫ್ರೀ ಸಂಖ್ಯೆ. 18004252550ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net