

ತುಮಕೂರು: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಮೌಲಾನ ಆಜಾದ್ ಮಾದರಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ. 25ರರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ.
ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ.ಗಳನ್ನು ಮೀರಿರಬಾರದು. ಆಸಕ್ತರು ಖಂಖಿಖ ಸಂಖ್ಯೆ, ಆಧಾರ್ ಸಂಖ್ಯೆ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಅಂಗವೈಕಲ್ಯ ಪ್ರಮಾಣಪತ್ರ, ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಮೇ 10ರೊಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ, ಮೌಲಾನ ಆಜಾದ್ ಮಾದರಿ ಶಾಲೆ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಅಥವಾ ಇಲಾಖಾ ವೆಬ್ಸೈಟ್ಗೆ ಭೇಟಿ ನೀಡಿ ಪಡೆಯಬಹುದು.