

ತುಮಕೂರು: ತುಮಕೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಜೆ.ಸಿ.ಮಧುಸ್ವಾಮಿ ಮಾಧುಸ್ವಾಮಿ ಕಣಕ್ಕಿಳಿಯುತ್ತಾರೆ ಎಂಬ ಗುಸುಗುಸು ನಡುವೆ ಹಾಲಿ ಸಂಸದ ಜಿ.ಎಸ್.ಬಸವರಾಜು ಅಪಸ್ವರ ಎತ್ತಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆಯಲ್ಲಿ ಮಾತನಾಡಿದ ಅವರು, ಮಾಧುಸ್ವಾಮಿ ಮಂತ್ರಿಯಾಗಿದ್ದಾಗ ಅವರ ಕಚೇರಿಗೆ ಭೇಟಿ ನೀಡಿ ಅರ್ಧಗಂಟೆ ಕುಳಿತರೂ ಸೌಜನ್ಯಕ್ಕೂ ಮಾತನಾಡಿಸಲಿಲ್ಲ ಇಂತಹ ಅವಮಾನಗಳು ಇಂದಿಗೂ ನನ್ನ ಮನಸ್ಸಿನಲ್ಲಿದೆ ಎಂದು ಆಕ್ರೋಶ ಹೊರಹಾಕಿದರು.
ತುಮಕೂರು ಕ್ಷೇತ್ರದಲ್ಲಿ ವಿ.ಸೋಮಣ್ಣಗೆ ಟಿಕೆಟ್ ನೀಡಬೇಕು ಎಂದು ನಾನು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ, ಹೆಬ್ಬಾಕ ರವಿ, ಎಸ್.ಪಿ.ಚಿದಾನಂದ್‌ಗೆ ಕೊಟ್ಟರೂ ಬೆಂಬಲ ನೀಡುತ್ತೇನೆ ಎಂದ ಅವರು, ಮಾಧುಸ್ವಾಮಿ ಸ್ಫರ್ಧೆಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿರುವುದು ಕುತೂಹಲ ಮೂಡಿಸಿದೆ.