ಅಣಬೆ ಬೇಸಾಯ ಉಚಿತ ತರಬೇತಿಗೆ ಅರ್ಜಿ

Mushroom
Published on

ತುಮಕೂರು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಗಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ವ್ಯಾಪ್ತಿಯ ಗ್ರಾಮೀಣ ಆಸಕ್ತ ಯುವ ಜನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಸಕ್ತರು ಹೆಸರನ್ನು ನೋಂದಾಯಿಸಲು ಆಗಸ್ಟ್ 2 ಕೊನೆಯ ದಿನ.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುತ್ತಿದೆ.

ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.9113880324, 9740982585, 8884554510, 9241482541 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net