

ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ವಾರ್ಷಿಕ 5000 ರೂ. ಆರ್ಥಿಕ ನೆರವು ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 15ರವರೆಗೆ ವಿಸ್ತರಿಸಲಾಗಿದೆ.
ನೇಕಾರರ ಸಮ್ಮಾನ್ ಯೋಜನೆಯಡಿ ಈ ಹಿಂದೆ ನೋಂದಣಿಯಾಗಿರುವ ಕೈಮಗ್ಗ ನೇಕಾರರು, ಮಗ್ಗ ಪೂರ್ವ ನೇಕಾರರು, ಮಗ್ಗ ಪೂರ್ವ ಚಟುವಟಿಕೆ ಮಾಡುತ್ತಿರುವ ವಿದ್ಯುತ್ ಮಗ್ಗ ಹಾಗೂ ಕೈಮಗ್ಗ ನೇಕಾರರು, ಕಾರ್ಮಿಕರು ಆರ್ಥಿಕ ನೆರವು ಪಡೆಯಬಹುದು. ಈ ಆರ್ಥಿಕ ನೆರವು ಸೌಲಭ್ಯಕ್ಕಾಗಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗದ ನೇಕಾರರು ಅರ್ಜಿ ಸಲ್ಲಿಸಬಹುದು.
ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನ.15ರೊಳಗೆ ಉಪ ನಿರ್ದೇಶಕ, ಕೈಮಗ್ಗ ಮತ್ತು ಜವಳಿ ಇಲಾಖೆ, 5ನೇ ಕ್ರಾಸ್, ಸಿದ್ದಗಂಗಾ ಬಡಾವಣೆ, ತುಮಕೂರು. ಇವರಿಗೆ ಸಲ್ಲಿಸಬೇಕು. ಮಾಹಿತಿಗೆ ದೂ.0816- 2275370 ಸಂಪರ್ಕಿಸಿ.