11ರಂದು ಒನಕೆ ಓಬವ್ವ ಜಯಂತಿ

Onake Obavva
Published on

ತುಮಕೂರು: ನ.11ರಂದು ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ "ಒನಕೆ ಓಬವ್ವ ಜಯಂತಿ' ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಒನಕೆ ಓಬವ್ವ ಅವರ ಭಾವಚಿತ್ರವನ್ನು ವಿವಿಧ ಕಲಾ ತಂಡಗಳೊಂದಿಗೆ ನಗರದ ಬಿ.ಜಿ.ಎಸ್​.ವೃತ್ತದಿಂದ ಮೆರವಣಿಗೆ ನಡೆಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎಸ್​ಎಸ್​ಎಲ್​ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ಸಮುದಾಯದ ತಲಾ 5 ವಿದ್ಯಾರ್ಥಿಗಳು ಹಾಗೂ 10 ಜನ ಸಮುದಾಯದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ.

ಸಭೆಯಲ್ಲಿ ಜಿಲ್ಲಾ ಪಂಚಾಯತ್​ ಉಪ ಕಾರ್ಯದರ್ಶಿ ಸಂಜೀವಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್​ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net