ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆಕ್ಷೇಪಣೆಗೆ ಅವಕಾಶ

Digital survey
ಕಾಸರಗೋಡು ಜಿಲ್ಲೆಯಲ್ಲಿ ಡಿಜಿಟಲ್ ಸಮೀಕ್ಷೆ ಕಾರ್ಯದಲ್ಲಿ ನಿರತರಾಗಿರುವ ಕಂದಾಯ ಅಧಿಕಾರಿಗಳು.
Published on

ತುಮಕೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗ, ಇತರೆ ಜಾತಿ, ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ, ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಆ.22ರಂದು ಮಾಧ್ಯಮಗಳಿಗೆ ಸುದ್ದಿ ಬಿಡುಗಡೆ ಮಾಡಲಾಗಿದ್ದು ಯಾವುದೇ ಜಾತಿ, ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ ಸೆ.1ರ ವರೆಗೂ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ.

ಸಾರ್ವಜನಿಕರು ಸಲಹೆ, ಸೂಚನೆ, ಮನವಿಗಳನ್ನು ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್​ ಟ್ಯಾಂಕ್​ ಬಂಡ್​ ಪ್ರದೇಶ, ವಸಂತ ನಗರ, ಬೆಂಗಳೂರು ಇವರಿಗೆ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net