ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಮತ್ತೊಂದು ಅವಕಾಶ

23BMVOTERSLIST
Published on

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತದಾರರ ಅನುಕೂಲಕ್ಕಾಗಿ ನ.18 ಮತ್ತು 19ರಂದು ಹಾಗೂ ಡಿ.2 ಮತ್ತು 3ರಂದು ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಈ ವಿಶೇಷ ಆಂದೋಲನದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ತೆಗೆದು ಹಾಕುವಿಕೆಗೆ ಸಂಬಂಧಿಸಿದಂತೆ ಅರ್ಜಿ ಸ್ವೀಕರಿಸಲಿದ್ದಾರೆ.

ಈಗಾಗಲೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರ ವರೆಗೆ ಅವಕಾಶವಿದೆ. ಸಾರ್ವಜನಿಕರು ತಮ್ಮ ನಿವಾಸ ವ್ಯಾಪ್ತಿಯ ಮತಗಟ್ಟೆಗಳಲ್ಲಿನ ಮತದಾರರ ಪಟ್ಟಿಗಳಲ್ಲಿ ತಮ್ಮ ಹಾಗೂ ತಮ್ಮ ಮನೆ ಸದಸ್ಯರ ಹೆಸರುಗಳು ನಮೂದಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net