ಕೊಬ್ಬರಿ ಬೆಲೆಗೆ ಆಗ್ರಹಿಸಿ ಅಕ್ಟೋಬರ್ 2ರಿಂದ ತಿಪಟೂರಿನಿಂದ ಪಾದಯಾತ್ರೆ

01TMK_RAitha
Published on

ತುಮಕೂರು: ಕೊಬ್ಬರಿ ಕನಿಷ್ಟ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅಕ್ಟೋಬರ್ 2ರ ಗಾಂಧಿ ಜಯಂತಿಯAದು ತಿಪಟೂರಿನಿಂದ ಬೆಂಗಳೂರಿಗೆ 15 ಜಿಲ್ಲೆಗಳ ರೈತರು ಪಾದಯಾತ್ರೆ ಆರಂಭಿಸಲಿದ್ದಾರೆ.

ತೆಂಗು ಮತ್ತು ಕೊಬ್ಬರಿ ವೈಜ್ಞಾನಿಕ ಬೆಂಬಲ ಬೆಲೆಯ ಮುಂದುವರೆದ ಭಾಗವಾಗಿ ಆಗಸ್ಟ್ 15 ರಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಎಲ್ಲಾ ಶಾಸಕರಿಗೆ ಮನವಿ ಸಲ್ಲಿಸಲಾಗುತ್ತಿದೆ.

ಅಕ್ಟೋಬರ್ 7ರಂದು ಪಾದೆಯಾತ್ರೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಸಮಾವೇಶಗೊಳ್ಳಲಿದ್ದು ಹಕ್ಕೊತ್ತಾಯ ಸಭೆ ಕೂಡ ನಡೆಯಲಿದೆ.

ನಗರದ ಕನ್ನಡ ಭವನದಲ್ಲಿ ಮಂಗಳವಾರ ಸಂಯುಕ್ತ ಹೋರಾಟ ಕರ್ನಾಟಕ, ಕೊಬ್ಬರಿ ಬೆಳೆಗಾರರ ಹೋರಾಟ ಸಮಿತಿ, ತೆಂಗು ಬೆಳೆಗಾರರ ಸೀಮೆ ಕರ್ನಾಟಕ ಜಂಟಿಯಾಗಿ ಸಂಯುಕ್ತ ಹೋರಾಟ ಕರ್ನಾಟಕದ ತುಮಕೂರು ಹೆಸರಿನಲ್ಲಿ ಕೊಬ್ಬರಿ ಬೆಲೆ ಕುಸಿತದ ಬಗ್ಗೆ ಆಯೋಜಿಸಿದ್ದ ರೈತರ ಸಮಾಲೋಚನಾ ಸಭೆಯಲ್ಲಿ ಪ್ರತಿಭಟನೆಗೆ ನಿರ್ಧರಿಸಲಾಯಿತು.

ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಕುಸಿದಿರುವ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಂಸತ್ ಅಧಿವೇಶದಲ್ಲಿ ರೈತರ ಪರವಾಗಿ ಮಾತನಾಡಬೇಕು ಎಂದು ಒತ್ತಾಯಿಸಿ ತೆಂಗು ಬೆಳೆಯುವ ಜಿಲ್ಲೆಯಲ್ಲಿ ಆಯಾ ಸಂಸದರ ಮನೆಯ ಮುಂದೆ ಆ.5ರಂದು ಪ್ರತಿಭಟನೆಗೆ ರೈತರು ತಿರ್ಮಾನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net