

ತುಮಕೂರು: ಜಿಲ್ಲೆಯಲ್ಲಿ ಸಕ್ರಿಯವಾಗಿರುವ 661625 ಪಡಿತರ ಚೀಟಿಗಳ ಪೈಕಿ ಆಧಾರ್ ಸಂಖ್ಯೆಯೊAದಿಗೆ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿರುವ 529515 ಪಡಿತರ ಚೀಟಿಗಳಿಗೆ 30.42ಕೋಟಿ ರೂ. ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತಿದೆ.
ಜಿಲ್ಲೆಯಲ್ಲಿ 70831 ಪಡಿತರ ಚೀಟಿಗಳ ಖಾತೆ ಸಮಸ್ಯ ಇರುವ ಪಡಿತರ ಚೀಟಿದಾರರಾಗಿರುತ್ತಾರೆ, ಇವರೆಲ್ಲರೂ ಸಹ ತಮ್ಮ ಬ್ಯಾಂಕ್‌ಗಳಿಗೆ ತೆರಳಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಲು ಆಹಾರ ಇಲಾಖೆ ಸೂಚಿಸಿದೆ.
ಪಡಿತರ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ 5ಕೆಜಿ ಆಹಾರಧಾನ್ಯದ ಬದಲಾಗಿ ಪ್ರತಿ ಕೆಜಿಗೆ 34ರೂ. ಪಡಿತರ ಚೀಟಿಯಲ್ಲಿನ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗುವುದು.
ಆದ್ಯತಾ ಪಡಿತರ ಚೀಟಿ ಪ್ರತಿ ಫಲಾನುಭವಿಗೆ 5ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿ 34ರೂ/5 ಒಟ್ಟು 170 ಹಾಗೂ ಅಂತ್ಯೋದಯ ಅನ್ನಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ 3 ಅಥವಾ 3ಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬ ಈಗಾಗಲೇ 35 ಕೆಜಿ ಆಹಾರಧಾನ್ಯ ಪಡೆಯುತ್ತಿರುವುದರಿಂದ ಅಂತಹ ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಕುಟುಂಬಗಳಿಗೆ ನಗದು ಸೌಲಭ್ಯ ನೀಡಲಾಗುತ್ತಿಲ್ಲ.
ಅಂತ್ಯೋದಯ ಪಡಿತರ ಚೀಟಿಯ ಕುಟುಂಬದಲ್ಲಿ 4 ಸದಸ್ಯರಿದ್ದರೆ ಕುಟುಂಬಕ್ಕೆ 170ರೂ.ಗಳನ್ನು 5 ಸದಸ್ಯರನ್ನು ಹೊಂದಿರುವ ಕುಟುಂಬಕ್ಕೆ 510ರೂ.ಗಳನ್ನು 6 ಸದಸ್ಯರನ್ನು ಹೊಂದಿರುವ ಕುಟುಂಬಕ್ಕೆ 850ರೂ.ಗಳನ್ನು ನೀಡಲಾಗುತ್ತದೆ. ಹೆಚ್ಚಿನ ಸದಸ್ಯರಿದ್ದಲ್ಲಿ ಇದೇ ರೀತಿಯ ಅನುಪಾತ ಮುಂದುವರಿಯಲಿದೆ. ಕಳೆದ ಮೂರು ತಿಂಗಳಿನಲ್ಲಿ ಪಡಿತರ ಆಹಾರಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ಮಾತ್ರ ನಗದು ವರ್ಗಾವಣೆಯ ಸೌಲಭ್ಯ ಪಡೆಯಲು ಅರ್ಹರು.