ಕೇಬಲ್ ಅಳವಡಿಕೆಗೆ ಅನುಮತಿ ಕಡ್ಡಾಯ

TUMKUR-PALIKE
Published on

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಗೆ ಸಂಬAಧಿಸಿದ ಬೀದಿದೀಪ ಕಂಬಗಳ ಮೇಲೆ ಅನಧಿಕೃತವಾಗಿ ಕೇಬಲ್ ಅಳವಡಿಸಿರುವುದು ಕಂಡು ಬಂದಿದ್ದು, ಇದರಿಂದಾಗಿ ಸಾರ್ವಜನಿಕರ ಸುರಕ್ಷತೆಗೆ ತೊಂದರೆಯಾಗಿದೆ.

ಕೇಬಲ್ ವೈರ್ ಅಳವಡಿಸಿರುವವರು, ಏಜೆನ್ಸಿದಾರರು ಮೇ.10ರೊಳಗೆ ಅರ್ಜಿ ಸಲ್ಲಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಅನುಮತಿ ಪಡೆಯಲು ಸೂಚಿಸಿದೆ. ತಪ್ಪಿದ್ದಲ್ಲಿ ಪಾಲಿಕೆಯಿಂದ ಮುಂದಿನ ಸೂಕ್ತ ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net