

ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 19, 20, 21ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆ ಆಲಿಸಲು ಸೆ.21ರ ಬೆಳಗ್ಗೆ 11ಕ್ಕೆ ಕುವೆಂಪು ನಗರದ ನೇತಾಜಿ ಪಾರ್ಕಿನಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ.
ನಾಗರಿಕರು ಜನಸ್ಪಂದನ ಕಾರ್ಯಕ್ರಮದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.